ಬೆಂಗಳೂರು:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಭಾನುವಾರ 2.1 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಇಂಡೋನೇಷಿಯಾ ಪ್ರಜೆಯನ್ನು ಬಂಧಿಸಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಆರೋಪಿ, ಬ್ಯಾಂಕಾಕ್‍ಗೆ ಹೊರಡುವ ವಿಮಾನ ಹತ್ತಲು ಸಿದ್ಧತೆಯಲ್ಲಿದ್ದ. ಸುಂಕ ಮತ್ತು ಭದ್ರತಾ ಅಧಿಕಾರಿಗಳು ನಡೆಸಿದ ತಪಾಸಣೆ ನಡೆಸಿದ ನಂತರ ವಿದೇಶಿ ಕರೆನ್ಸಿಗಳ ದೊಡ್ಡ ಮೊತ್ತ ಪತ್ತೆಯಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ.
ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿರುವ ಸುಂಕ ಅಧಿಕಾರಿಗಳು, ಕಾನೂನು ಬಾಹಿರವಾಗಿ ಕರೆನ್ಸಿ ಸಾಗುತ್ತಿರುವುದಾಗಿ ಕಂಡು ಬಂದಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ