ಬೆಂಗಳೂರು :
ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಸೃಷ್ಟಿ ಮಾಡಿತು. ಬೆಳಗ್ಗೆ ಸುಮಾರು 5.30 ಕ್ಕೆ ಕಲಾಗ್ರಾಮದಲ್ಲಿರುವ ಆಡಿಟೋರಿಯಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 40 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ .
ಲೈಟ್ ರೂಂ,ಸೌಂಡ್ ಸಿಟ್ಟಂ ಕುರ್ಚಿಗಳು ಹಾಗೂ ಇನ್ನು ಮುಂತ್ತಾದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ