ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು:

  ತಮಿಳುನಾಡಿನ ಕಂಬಂನಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ತಮಿಳುನಾಡಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿರುವ ನಂದಿನಿ ಲೇಔಟ್ ಪೊಲೀಸರು 10 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

  ತಮಿಳುನಾಡಿನ ಥೇನಿ ಜಿಲ್ಲೆಯ ದಿವಾಕರ್ (21), ಶ್ರೀರಾಂ (19)ಎನ್ನುವ ಪದವಿ ವಿದ್ಯಾರ್ಥಿಗಳನ್ನು ಬಂಧಿಸಿ 10 ಕೆಜಿ ಗಾಂಜಾ ವಶಪಡಿಸಿಕೊಂಡು ಇವರಿಬ್ಬರ ಜೊತೆ ಗಾಂಜಾ ಮಾರಾಟದಲ್ಲಿ ತೊಡಗಿ ತಲೆಮರೆಸಿಕೊಂಡಿರುವ ಅಜಿತ್‍ಗಾಗಿ ತೀವ್ರ ಶೋಧ ನಡೆಸಲಾಗಿದೆ.

  ಆರೋಪಿಗಳು ಗಾಂಜಾ ಖರೀದಿಸಿಕೊಂಡು ಬಂದು ನಂದಿನಿ ಲೇಔಟ್‍ನ ಎಫ್‍ಟಿಐ ವೃತ್ತದ ಬಳಿ ಮಾರಾಟ ಮಾಡುವಾಗ ಕಾರ್ಯಾಚರಣೆ ನಡೆಸಿದ ಇನ್ಸ್‍ಪೆಕ್ಟರ್ ರೋಹಿತ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

   ಆರೋಪಿ ದಿವಾಕರ್ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆ, ಮತ್ತೊಬ್ಬ ಶ್ರೀರಾಂ ಡಿಪ್ಲೊಮೊ ವ್ಯಾಸಂಗ ಮಾಡುತ್ತಿದ್ದ ಹಣದಾಸೆಗಾಗಿ ಇವರಿಬ್ಬರು ತಮಿಳುನಾಡಿನ ಅಜಿತ್ ಎಂಬಾತನ ಜತೆ ಕಂಬಂನಿಂದ ಗಾಂಜಾವನ್ನು ಖರೀದಿಸಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿ ಅಜಿತ್‍ಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಡಿಸಿಪಿ ಚೇತನ್ ಸಿಂಗ್ ತಿಳಿಸಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ