ಬೆಂಗಳೂರು:
ಮಾಜಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಬಾರದು. ಅವರೊಬ್ಬ ಕ್ರಿಮಿನಲ್ ಲಾಯರ್. ದಾಖಲೆ ಇದ್ರೆ ಮಾತಾಡಲಿ ಅಂತಾ ಶಾಸಕ ಸಿ.ಟಿ.ರವಿ ಹೇಳಿ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ 30 ಕೋಟಿ ಆಪರ್ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಕಲಾಪಕ್ಕೂ ಮೊದಲು ಮಾತನಾಡಿದ ಅವರು, ನಾವು ಯಾವುದೇ ಆಪರೇಷನ್ ಮಾಡಿಲ್ಲ. ಆ ಬಗ್ಗೆ ದಾಖಲೆ ಇದ್ರೆ ಸಿದ್ದರಾಮಯ್ಯ ಬಿಡುಗಡೆ ಮಾಡಲಿ. ಸುಮ್ನೆ ನಮ್ಮ ಮೇಲೆ ಆರೋಪ ಮಾಡೋದು ಬೇಡ ಅಂತಾ ಹೇಳಿದರು. ಇದೇ ವೇಳೆ, ಈ ಸರ್ಕಾರಕ್ಕೆ ಬಹುಮತ ಇಲ್ಲ. ಈ ಬಗ್ಗೆ ಹಂತ ಹಂತವಾಗಿ ನಾವು ಹೋರಾಟ ಮಾಡುತ್ತೇವೆ ಅಂತಾ ಹೇಳಿದರು.
ವಿಧಾನಸೌಧದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶಾಸಕರ ಜೊತೆ ಚರ್ಚೆ ನಡೆಸಿದರು. ಸಭೆಯಲ್ಲಿ ಮಾಜಿ ಸ್ಪೀಕರ್ ಕೆ.ಜೆ ಬೋಪಯ್ಯ, ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್, ವಿಧಾನಸಭೆ ಬಿಜೆಪಿ ಮುಖ್ಯ ಸಚೇತಕ ಸುನೀಲ್ ಕುಮಾರ್, ಸಿ.ಟಿ ರವಿ ಸೇರಿದಂತೆ 20ಕ್ಕೂ ಹೆಚ್ಚು ಬಿಜೆಪಿ ಶಾಸಕರು ಭಾಗಿಯಾಗಿದ್ರು. ಬಳಿಕ ಶಾಸಕರ ಜೊತೆ ಸದನಕ್ಕೆ ತೆರಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ