ಬೆಂಗಳೂರು:
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಇಂದು ಡಿಸೆಂಬರ್. 31 ರಂದು ನಗರದಾದ್ಯಂತ ಹೋಟೆಲ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಸೇವೆ ಮಧ್ಯರಾತ್ರಿವರೆಗೂ ಲಭ್ಯವಾಗಲಿದೆ. ಸಂಭ್ರಮಾಚರಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳು ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ. ಅಲ್ಲದೇ ಹೊಸ ವರ್ಷಾಚರಣೆ ವೇಳೆ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಡೆದುಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಕಿಡಿಗೇಡಿಗಳು ಎಚ್ಚರಿಕೆ ನೀಡಿದೆ. ಜೊತೆಗೆ ಬೆಂಗಳೂರು ಕಮಿಷನರ್ ವ್ಯಾಪ್ತಿಗೆ ಸೇರಿದ ಪ್ರದೇಶದಲ್ಲಿರುವ ಬಾರ್, ಪಬ್, ರೆಸ್ಟೋರೆಂಟ್, ಹೋಟೆಲ್ ಹಾಗೂ ಆಹಾರ ಪೂರೈಕೆ ಸ್ಥಳಗಳಿಗೆ 3 ಗಂಟೆ ಕಾಲ ಹೆಚ್ಚುವರಿ ಸಮಯ ನೀಡಲಾಗಿದೆ. ಹೀಗಾಗಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಂಗಳೂರಿಗರು ಪೊಲೀಸರ ಭಯ ಇಲ್ಲದಯೇ ಮಧ್ಯರಾತ್ರಿಯವರೆಗೂ ಪಾನಗೋಷ್ಠಿಯನ್ನು ನಡೆಸಬಹುದಾಗಿದೆ.
ಹೊಸ ವರ್ಷದ ಸಂಭ್ರಮಕ್ಕೆ ಕಾರ್ಯಕ್ರಮ ಆಯೋಜನೆ ಬಗ್ಗೆ ಸ್ಥಳೀಯರು ಪ್ರತಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೋಟೆಲ್‌ಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲಾಗಿದೆ. ಪಾರ್ಟಿಯಲ್ಲಿ ಭಾಗಿಯಾಗುವ ಯುವಕ-ಯುವತಿಯರಿಗೆ ಖಾಸಗಿ ಭದ್ರತೆ ಒದಗಿಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಆಯೋಜಕರೇ ನೇರ ಹೊಣೆಯಾಗುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ಧಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ