‘ಕಮಲ’ ಬಿಟ್ಟು ಕಾಂಗ್ರೆಸ್ ‘ಕೈ’ ಹಿಡಿದ ರಾಜು ಕಾಗೆ!!

ಬೆಂಗಳೂರು :

      ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಪರಾಭವ ಅಭ್ಯರ್ಥಿ ರಾಜು ಕಾಗೆ, ಬಿಜೆಪಿಗೆ ನಾಳೆ ಗುಡ್ ಬೈ ಹೇಳಿ, ನಾಡಿದ್ದು ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ್ದಾರೆ.

       ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ರಾಜು ಕಾಗೆ,ಈಗಾಗಲೇ ಸಿದ್ದರಾಮಯ್ಯ, ಡಿಕೆಶಿ ಹಾಗೂ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇನೆ. ಪಕ್ಷ ಸೇರ್ಪಡನೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್​ ನಾಯಕರು ಟಿಕೆಟ್​ ನೀಡುವ ಭರವಸೆ ನೀಡಿದ್ದು, ಕಾಂಗ್ರೆಸ್​ ಪಕ್ಷ ಸೇರುತ್ತೇನೆ ಎಂದಿದ್ದಾರೆ.Related image

      ಬಿಜೆಪಿಯಲ್ಲಿನ ಬೆಳವಣಿಗೆ ನನಗೆ ನೋವು ತಂದಿದ್ದು, ಶ್ರೀಮಂತ ಪಾಟೀಲ್‍ಗೆ ಟಿಕೆಟ್ ನೀಡುತ್ತಿರುವುದು ಬೇಸರ ತಂದಿದೆ. ಮೂರೂವರೆ ವರ್ಷ ಸುಮ್ಮನೇ ಇರುವಂತೆ ಬಿಜೆಪಿ ಆಮಿಷ ಒಡ್ಡಿದೆ. ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಅದನ್ನು ನೀಡಿಲ್ಲ. ತಾವು ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿದ್ದು, ನಾಳೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

      ನಾನು 15 ವರ್ಷದಿಂದ ಬಿಜೆಪಿಯಲ್ಲಿ ಇದ್ದೇನೆ. ಮೂರು ಬಾರಿ ಶಾಸಕ ಆಗಿದ್ದೇನೆ. ಶಾಸಕನಾದ ಸಮಯದಲ್ಲೂ ಬಿಜೆಪಿಯಲ್ಲಿ ನನಗೆ ಬಹಳ ನೋವು ನೀಡಿದ್ದರು ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದ ಅವರು, ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ. ನ.18ರಂದು  ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದೂ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap