ಆಟೋಗೆ ಗುದ್ದಿದ ಬಸ್ ; ಒಂದೇ ಕುಟುಂಬದ ನಾಲ್ವರ ಸಾವು!!

ಬಿಹಾರ :

     ಆಟೋಗೆ ಬಸ್​ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

     ಪಾಟ್ನಾದ ಗೌರಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಆಟೋದಲ್ಲಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್​ ನಿಯಂತ್ರಣ ತಪ್ಪಿ ಆಟೋಗೆ ಗುದ್ದಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

     ಘಟನೆಯಿಂದ ಕೆಂಡಾಮಂಡಲರಾದ ಸ್ಥಳೀಯರು ರಸ್ತೆ ಮೇಲೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap