ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ!!

ಚೆನ್ನೈ :

      ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ.

     ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ಅವರು ಮನುಸ್ಮೃತಿ ಉಲ್ಲೇಖಿಸಿ ಮಹಿಳೆಯರ ಬಗ್ಗೆ ಆಡಿದ್ದರು ಎನ್ನಲಾದ ಮಾತುಗಳ ವಿರುದ್ಧ ಬಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಅದರಲ್ಲಿ ಪಾಲ್ಗೊಳ್ಳಲು ಖುಷ್ಬೂ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

      ‘ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

     ಮುಂಜಾಗೃತಾ ಕ್ರಮವಾಗಿ ನಟಿ ಖುಷ್ಬೂ ಸೇರಿದಂತೆ ಹಲವು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು‌ ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ