ಪಾಟ್ನ:
ಭೀಕರ ಪ್ರವಾಹದಿಂದಾದಿ ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಲು ತೆರಳಿದ್ದ ಸಂಸದರೇ ನೀರಿನಲ್ಲಿ ಮುಳುಗಿರುವ ಘಟನೆ ಪಾಟ್ನಾದ ಮಸೌರಿ ಪ್ರದೇಶದಲ್ಲಿ ನಡೆದಿದೆ.
#WATCH Bihar: BJP MP Ram Kripal Yadav falls into the water after the makeshift boat he was in, capsized in Masaurhi, Patna district, during his visit to the flood affected areas yesterday. He was later rescued by the locals. (02.10.2019) pic.twitter.com/iwI4OdNGiH
— ANI (@ANI) October 3, 2019
ಬಿಹಾರದ ಧನ್ರುವಾ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿಯನ್ನು ಪರಿಶೀಲಿಸಲು ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತರೆಳಿದ್ದರು. ಸಂಸದರನ್ನು ಚಿಕ್ಕ ತೆಪ್ಪವೊಂದರಲ್ಲಿ ಕರೆದೊಯ್ಯಲಾಗಿತ್ತು. ಈ ವೇಳೆ ನೆರೆ ವೀಕ್ಷಣೆ ಮಾಡುತ್ತಿದ್ದಾಗ ಸಂಸದರಿದ್ದ ದೋಣಿ ಮಗುಚಿ ಬಿದ್ದಿದ್ದು, ತಕ್ಷಣ ಸ್ಥಳದಲ್ಲಿದ್ದವರು ಅವರನ್ನು ರಕ್ಷಣೆ ಮಾಡಿದ್ದಾರೆ.
ತಕ್ಷಣ ಎಲ್ಲರನ್ನೂ ರಕ್ಷಣೆ ಮಾಡಿದ್ದಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಸದರ ದೋಣಿ ಮಗುಚಿ ಬೀಳುತ್ತಿರುವ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ