ಅಡ್ವಾಣಿ ಕ್ಷೇತ್ರದಿಂದ ಅಮಿತ್ ಶಾ ಕಣಕ್ಕೆ!!!

ಗಾಂಧಿನಗರ:

       ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಅಡ್ವಾಣಿ ಅವರ ಸ್ವ ಕ್ಷೇತ್ರ ಈ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ. 

      ರಾಜ್ಯ ಸಭಾ ಸದಸ್ಯರಾಗಿರುವ ಅಮಿತ್​ ಶಾ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿ ನಂತರ ಅಹಮದಬಾದ್​ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ.

      ಸಮಾವೇಶದಲ್ಲಿ ಶಿವಸೇನಾ, ಶಿರೋಮಣಿ ಅಕಾಲಿ ದಳ, ಲೋಕ ಜನಶಕ್ತಿ ಸೇರಿದಂತೆ ಎನ್‌ಡಿಎ ಮೈತ್ರಿ ಪಕ್ಷಗಳ ನಾಯಕರು, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಹಾಜರಾಗಿದ್ದು, ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರೂ ಆಗಮಿಸಲಿದ್ದಾರೆ.

      ಈ ವೇಳೆ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌, ಬಹುಕಾಲದವರಗೆ ಎಲ್‌ಕೆ ಅಡ್ವಾಣಿಯವರು ಪ್ರತಿನಿಧಿಸಿದ್ದ ಗಾಂಧಿನಗರ ಲೋಕಸಭಾ ಕ್ಷೇತ್ರದ ರಾಜಕೀಯ ಹೊಣೆಗಾರಿಕೆಯನ್ನು ಅಮಿತ್ ಶಾ ವಹಿಸಿಕೊಂಡಿದ್ದಾರೆ ಎಂದು ವ್ಯಾಖ್ಯಾನಿಸಿದರು.ಇಂದು ಅಮಿತ್​ ಶಾ ನಾಮಪತ್ರ ಸಲ್ಲಿಕೆ; ಅಡ್ವಾಣಿ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದು ನನ್ನ ಭಾಗ್ಯ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

      ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರು ಆರು ಬಾರಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. 1991ರಲ್ಲಿ ಕಾಂಗ್ರೆಸ್​ ಜಿಐ ಪಟೇಲ್​ ಅವರನ್ನು ಸೋಲಿಸುವ ಮೂಲಕ ಅಡ್ವಾಣಿ ಇಲ್ಲಿ ಗೆಲುವಿನ ನಗೆ ಬೀರಿದ್ದರು. 2014ರಲ್ಲಿ ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದ ಅಡ್ವಾಣಿ ಅವರಿಗೆ ಇದೇ ಕೊನೆಯ ಚುನಾವಣೆಯಾಯಿತು. 

      ಗುಜರಾತ್​ನಲ್ಲಿ ಏಪ್ರಿಲ್​ 4ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ 26 ಕ್ಷೇತ್ರಗಳಿಗೆ ಎಪ್ರಿಲ್​ 23ರಂದು ಮತದಾನ ನಡೆಯಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap