ನವದೆಹಲಿ:
ಪೊಲೀಸರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ಬಳಿಕ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ (ಬಿಕೆಐ) ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.
ಉಗ್ರರ ಸಂಚಾರದ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ದೆಹಲಿ ಪೊಲೀಸ್ ವಿಶೇಷ ಪಡೆ ವಾಯುವ್ಯ ದೆಹಲಿಯಲ್ಲಿ ಸಂಚಾರ ನಡೆಸುವಾಗ ಬಂಧಿಸಲು ಪ್ರಯತ್ನಿಸಿದರು. ಆಗ ಪೊಲೀಸರ ಮೇಲೆ ಉಗ್ರರು ಗುಂಡು ಹಾರಿಸಿದರು. ಆಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಬಬ್ಬರ್ ಖಸ್ಲಾ ಇಂಟರ್ ನ್ಯಾಷನಲ್ (ಬಿಕೆಐ) ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತ ಉಗ್ರರನ್ನು ಭೂಪೇಂದರ್ ಅಲಿಯಾಸ್ ದಿಲ್ವಾರ್ ಸಿಂಗ್ ಮತ್ತು ಕುಲ್ವಂತ್ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರ ಬಳಿ ಇದ್ದ ಆರು ಪಿಸ್ತೂಲ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಬ್ಬರು ಬಂಧಿತ ಉಗ್ರರಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಇಬ್ಬರೂ ಉಗ್ರರ ಮೇಲೆ ಪಂಜಾಬ್‌ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ