ಕರಾಚಿ :
ಕರಾಚಿಯ ಗುಲ್ಶನ್-ಇ-ಇಕ್ಬಾಲ್ ಪ್ರದೇಶದ ಮಸ್ಕನ್ ಚೌರಂಗಿ ಬಳಿಯ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಲ್ಲಿರುವ ಕಟ್ಟಡದ ಎರಡನೇ ಮಹಡಿಯಲ್ಲಿ ಈ ಸ್ಫೋಟ ನಡೆದಿದೆ. ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಲ್ಲಿನ ಸುತ್ತಮುತ್ತ ಪ್ರದೇಶವನ್ನ ಸುತ್ತವರಿದು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ ಮೂವರು ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಹತ್ತಿರದ ಪಟೇಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟವೊಂದರ ಎರಡನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಆ ಕಟ್ಟಡ ಮಾತ್ರವಲ್ಲ, ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ಅಲ್ಲದೇ ಛಿದ್ರಗೊಂಡ ಅವಶೇಷಗಳು ಪಕ್ಕದ ರಸ್ತೆಗಳಿಗೆ ಬಂದು ಬಿದ್ದಿದೆ ಅಂತಾ ವರದಿಯಾಗಿದೆ.
ಸ್ಫೋಟದ ಹಿಂದೆ ಕೆಲ ಉಗ್ರ ಸಂಘಟನೆಗಳ ಕೈವಾಡ ಇದೆ ಎನ್ನುವ ಮಾತು ಕೇಳಿ ಬಂದಿದೆ. ಆದರೆ, ಇದೊಂದು ಸಿಲಿಂಡರ್ ಬ್ಲಾಸ್ಟ್ ಎಂದಷ್ಟೇ ಪೊಲೀಸರು ಹೇಳಿದ್ದಾರೆ. ತನಿಖೆ ನಂತರವಷ್ಟೇ ಈ ಬಗೆಗಿನ ಅಸಲಿ ವಿಚಾರ ತಿಳಿದು ಬರಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
