ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ತಿರಸ್ಕೃತ!!

ನವದೆಹಲಿ : 

     ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

      2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಲ್ಪಟ್ಟಿದ್ದರು. ಇಂತಹ ಅರ್ನಬ್ ಗೋಸ್ವಾಮಿ, ಬಾಂಬೆ ಹೈಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

      ಇಂದು ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದಂತ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಕೋರ್ಟ್, ಜಾಮೀನಿಗಾಗಿ ಕೆಳಹಂತದ ನ್ಯಾಯಾಲಯಕ್ಕೆ ಮೊದಲು ಅರ್ಜಿ ಸಲ್ಲಿಸುವಂತೆ ಸೂಚಿಸಿ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಯವರಿಗೆ ಜೈಲೇ ಗತಿಯಾದಂತೆ ಆಗಿದೆ.

      ಹೀಗಾಗಿ ಅರ್ನಬ್ ಗೋಸ್ವಾಮಿಯವರು ಜಾಮೀನಿಗಾಗಿ ಆಲಿಬಾಗ್ ಸೆಷನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap