ಶಾಕಿಂಗ್ ನ್ಯೂಸ್ : ಅರ್ಧದಷ್ಟು BSNL ನೌಕರರು ಮನೆಗೆ!!?

ದೆಹಲಿ :

      ತೀವ್ರ ಸಂಕಷ್ಟದಲ್ಲಿರುವ ಬಿಎಸ್‌ಎನ್‌ಎಲ್, ತನ್ನ ನೌಕರರಿಗೆ ಸಂಬಳ ನೀಡಲೂ ಪರದಾಡುತ್ತಿದ್ದು, ಅರ್ಧದಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ.

      ಖಾಸಗಿ ಕಂಪನಿಗಳ ಪೈಪೋಟಿ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್,  ಆಸ್ತಿ ಮಾರಾಟ ಮಾಡುವ ಮೂಲಕ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗಿದ್ದು, ಇದರ ಜೊತೆಗೆ ಅರ್ಧದಷ್ಟು ನೌಕರರನ್ನು ಸ್ವಯಂ ನಿವೃತ್ತಿ ಯೋಜನೆ ಮೂಲಕ ಮನೆಗೆ ಕಳುಹಿಸಲು ತೀರ್ಮಾನಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಕುಮಾರ್ ಪೂರ್ವರ್ ತಿಳಿಸಿದ್ದಾರೆ.

      ಬಿಎಸ್‌ಎನ್‌ಎಲ್ ನಲ್ಲಿ 1.7 ಲಕ್ಷದಷ್ಟು ಉದ್ಯೋಗಿಗಳಿದ್ದು, ಈ ಪೈಕಿ 60 ರಿಂದ 70 ಸಾವಿರ ಮಂದಿಯನ್ನು ಸ್ವಯಂ ನಿವೃತ್ತಿ ಯೋಜನೆಯಡಿ ಮನೆಗೆ ಕಳುಹಿಸಲಾಗುತ್ತದೆ ಎಂದು ಹೇಳಲಾಗಿದೆ. ಇದಕ್ಕಾಗಿ ಈಗಾಗಲೇ ಯೋಜನೆ ಸಿದ್ಧಗೊಳ್ಳುತ್ತಿದ್ದು, ಶೀಘ್ರದಲ್ಲೇ ಜಾರಿಗೊಳ್ಳುವ ನಿರೀಕ್ಷೆಯಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ