ನವದೆಹಲಿ :
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಎನ್‌ಡಿಎ ಸರ್ಕಾರದ ಚೊಚ್ಚಲ ಬಜೆಟ್ ಅನ್ನು ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.
ಇಂದು(ಜುಲೈ 5) ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಆಗಲಿದೆ. ನೂತನ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿರುವುದರಿಂದ ಮಧ್ಯಮ ವರ್ಗ ಹಾಗೂ ಮಹಿಳೆಯರ ನಿರೀಕ್ಷೆ ಜಾಸ್ತಿ ಇದೆ ಎನ್ನಲಾಗಿದೆ.
ಇಂದಿನ ಬಜೆಟ್ ನಲ್ಲಿ ನಿರೀಕ್ಷೆಗಳಿದ್ದು, ಪ್ರಮುಖವಾಗಿ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ದ ಈಡೇರಿಕೆಗೆ ಆದ್ಯತೆ ನೀಡುತ್ತಾರೆ ಎನ್ನಲಾಗಿದೆ. ರಾಷ್ಟ್ರೀಯ ಭದ್ರತೆಗಾಗಿ ಸೇನಾಪಡೆಗಳ ಆಧುನೀಕರಣ, ಬಲವರ್ಧನೆಗೆ ಹೆಚ್ಚಿನ ಆದ್ಯತೆ ಇದೆ. 45 ವರ್ಷಗಳಲ್ಲೇ ಹೆಚ್ಚಾಗಿರುವ ನಿರುದ್ಯೋಗ, ಬಡತನಕ್ಕೆ ಪರಿಹಾರ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಅನುದಾನ ಘೋಷಣೆ ಆಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ರೈಲ್ವೆ ಸಚಿವರಾಗಿದ್ದ ಪಿಯೂಷ್ ಗೊಯೇಲ್ ಬಜೆಟ್ ಮಂಡಿಸಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಬಜೆಟ್ ಆಗದೆ ಕೇವಲ ಲೇಖಾನುದಾನ ಪಡೆಯಲಾಗಿತ್ತು. ಈಗ ಮೋದಿ ನೇತೃತ್ವದ ಸರ್ಕಾರ ವಾಪಸ್ ಬಂದಿದ್ದ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
