ಬೆಂಗಳೂರು :
ಕೇಂದ್ರ ಬಜೆಟ್ 2021-22ರಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ಗಳ ದರವನ್ನ ಏರಿಕೆ ಮಾಡಲಾಗಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ಜಾರಿಯಾಗಲಿದೆ.
ಕೇಂದ್ರ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತರಾಮನ್ ಇಂದು ಬಜೆಟ್ ಮಂಡಿಸಿದ ಬೆನ್ನಲ್ಲೆ ಜನ ಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬಿದ್ದಿದ್ದು, ಪ್ರತಿ ಲೀಟರ್ ಪೆಟ್ರೋಲ್ ಗೆ 2.5 ರೂ. ಹಾಗೂ ಡೀಸೆಲ್ ಗೆ 4 ರುಪಾಯಿ ಏರಿಕೆಯಾಗಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಕೇಂದ್ರ ಸರ್ಕಾರ ಇದೀಗ ಮತ್ತೆ ತೈಲದ ಮೇಲಿನ ಸೆಸ್ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜರಿಗೆ ಮತ್ತಷ್ಟು ಹೊರೆ ನೀಡಿದೆ. ಈ ಮೂಲಕ ದಿನ ನಿತ್ಯದ ಬೆಲೆಯೂ ಏರಿಕೆಯಾಗಲಿದ್ದು, ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಿದೆ ಎನ್ನಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/07/petrol-pump-oil-crude-gas-d.gif)