ಲಖನೌ :
ಇಂದು ಮುಂಜಾನೆ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿಲಿಟ್ ನಲ್ಲಿ ನಡೆದಿದೆ.
ಲಖನೌನಲ್ಲಿನ ಕೇಸರಭಾಗ್ ಡಿಪೋದ ಬಸ್ ಹಾಗೂ ಬೊಲೆರೋ ವಾಹನ ನಡುವೆ ಪುರಾನಪುರ್ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 32 ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಫಿಲಿಬಿಟ್ ನ ಎಸ್ ಪಿ ಜಯಪ್ರಕಾಶ್ ಹಾಗೂ ಇತರೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ