ಕಾರು-ಟ್ರಕ್ ಡಿಕ್ಕಿ : ಒಂದೇ ಕುಟುಂಬದ 7 ಮಂದಿ ದುರ್ಮರಣ!!

ಮಹಾರಾಷ್ಟ್ರ :

     ಬೊಲೆರೋ ಕಾರು ಹಾಗೂ ಟ್ರಕ್​ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ದುರ್ಘಟನೆ ಮಹಾರಾಷ್ಟ್ರದ ಬೀಡ್​​ನ ಪಟೋಡಾದಲ್ಲಿ ನಡೆದಿದೆ.

     ಟ್ರಕ್ ಹಿಂಬದಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಇಬ್ಬರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

       ಮೃತರು ತಮ್ಮ ಸಂಬಂಧಿಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಮೃತರೆಲ್ಲರೂ ಮಹಾರಾಷ್ಟ್ರದ ಬೀಡ್​​ನ ಚುಟುಂಗ್ವಾಡಿ ಗ್ರಾಮದವರೆನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap