ಬೆಂಗಳೂರು:
ಹೋಟೆಲ್ ಬಿಲ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ ಎಂದು ಸ್ಯಾಂಡಲ್ ವುಡ್ ಸ್ಟಾರ್ ನಟಿ ಪೂಜಾ ಗಾಂಧಿ ಅವರ ವಿರುದ್ಧ ದೂರು ನೀಡಲಾಗಿದೆ.
ಪೂಜಾಗಾಂಧಿ ವಿರುದ್ಧ ಮಾ. 11 ರಂದು ಅಶೋಕ ಹೋಟೆಲ್ ಹೌಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಶೋಕ ಹೋಟೆಲ್ ಕಡೆಯಿಂದ ದೂರು ದಾಖಲಿಸಿದ್ದು, ದೂರಿನಲ್ಲಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದ ಪರಾರಿಯಾಗಿದ್ದರು ಎಂದು ಉಲ್ಲೇಖ ಮಾಡಲಾಗಿದೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್‍ಸಿಆರ್ ( ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದಾರೆ.
ನಂತರ ಪೊಲೀಸರು ಪೂಜಾಗಾಂಧಿಯವರನ್ನು ಠಾಣೆಗೆ ಕರೆಸಿಕೊಂಡು ದೂರಿಗೆ ಸಂಬಂಧಪಟ್ಟಂತೆ ಮಾಹಿತಿ ಪಡೆದುಕೊಂಡಿದ್ದಾರೆ, ಈ ವೇಳೆ ಪೂಜಾ ಗಾಂಧಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಲೀಸರ ಸಮ್ಮುಖದಲ್ಲಿಯೇ ಎರಡು ಲಕ್ಷ ರೂ.ಗಳನ್ನು ಕೊಟ್ಟು ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ