ದೆಹಲಿ:
ಸಿಬಿಐ ಸಹಿತ ಸ್ವಾಯತ್ತ ಸಂಸ್ಥೆ ಮೇಲೆ ಕೇಂದ್ರ ಹಸ್ತಕ್ಷೇಪ ಹಾಗೂ ಸಿಬಿಐ ನಿರ್ದೇಶಕ ಅಲೋಕ್ ವರ್ಮಾರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದನ್ನು ಖಂಡಿಸಿ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿಯ ಸಿಬಿಐ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದು. ಪ್ರತಿಭಟನೆಯ ನೇತೃತ್ವವನ್ನು ರಾಹುಲ್ ಗಾಂಧಿ ಅವರು ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆಯಲ್ಲಿ ಟಿಎಂಸಿ ಸೇರಿದಂತೆ ಹಲವು ವಿರೋಧ ಪಕ್ಷಗಳು ಜೊತೆ ನೀಡಿದೆ. ಕಾಂಗ್ರೆಸ್‌ನ ಹಲವು ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಿಬಿಐ ಮುಖ್ಯ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ತಡೆಗೋಡೆಯನ್ನು ಹಾಕಲಾಗಿತ್ತು. ಸಿಬಿಐ ಕಚೇರಿಯತ್ತ ಸಾಗುವ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ