ಸಿಬಿಎಸ್​​ಇ : 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು!!

ನವದೆಹಲಿ:

Send experienced teachers for evaluation or lose affiliation: CBSE ...

     ಜುಲೈ 1ರಿಂದ 15ರವರೆಗೆ ನಡೆಸಲು ಉದ್ದೇಶಿಸಿದ್ದ ಸಿಬಿಎಸ್ ಇ 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

      ಜುಲೈ 1ರಿಂದ 15ರೊಳಗೆ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಮಂಡಳಿ ಈ ಹಿಂದೆ ತಿಳಿಸಿತ್ತು. ಆದರೆ ಈ ಪರೀಕ್ಷೆಗಳಿಗೆ ತಮಿಳುನಾಡು, ಮಹಾರಾಷ್ಟ್ರ, ನವದೆಹಲಿ, ಒಡಿಶಾ ಸೇರಿದಂತೆ ಹಲವು ರಾಜ್ಯಗಳು ಪರೀಕ್ಷೆ ನಡೆಸಲು ಸಮ್ಮತಿ ಸೂಚಿಸಲಿಲ್ಲ.

      ಈಶಾನ್ಯ ದೆಹಲಿಯ ವಿದ್ಯಾರ್ಥಿಗಳಿಗೆ ಮಾತ್ರ 10ನೇ ತರಗತಿ ಪರೀಕ್ಷೆ ನಡೆಯಬೇಕಾಗಿತ್ತು. ಇದೀಗ ಅದು ರದ್ದುಗೊಂಡಿದೆ. ಒಂದು ವೇಳೆ ಪರೀಕ್ಷೆಗೆ ಹಾಜರಾಗಲು 12ನೇ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟರೆ ಪರಿಸ್ಥಿತಿ ಅನುಕೂಲ ಮಾಡಿಕೊಂಡು ಅವಕಾಶ ನೀಡಲಾಗುವುದು ಎಂದು ಮಂಡಳಿ ಸ್ಪಷ್ಟಪಡಿಸಿದೆ. 

     ಪರೀಕ್ಷೆ ಬರೆಯಲು ಬಯಸದ ವಿದ್ಯಾರ್ಥಿಗಳಿಗೆ ಕಳೆದ 3 ಮೂರು ಶಾಲಾ ಪರೀಕ್ಷೆಗಳ ಆಧಾರದ ಮೇಲೆ ಅಂಕ ನೀಡಲಾಗುವುದು. ಒಂದು ವೇಳೆ ಅವರಿಂದ ಅವರು ಸಂತೋಷವಾಗದಿದ್ದರೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಲಾಗುವುದು ಎಂದು ಸಾಲಿಸಿಟರ್​ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್​ಗೆ ತಿಳಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap