ಬೆಂಗಳೂರು:
ಬಳ್ಳಾರಿ ಲೋಕಸಭಾ ಉಪಚುನಾವಣೆ ಸೋಲಿನ ಬೆನ್ನಲೇ ಜನಾರ್ದನ ರೆಡ್ಡಿಗೆ ಮತ್ತೊಂದು ಶಾಕ್ ಕಾದಿದೆ. ರೆಡ್ಡಿ ಅವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದೆ.
ಸಿಸಿಬಿ ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿದೆ. ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಇದೀಗ ಕೇಳಿಬರುತ್ತಿದೆ.
ಜನಾರ್ದನ ರೆಡ್ಡಿ ಹಾಗೂ ಆಪ್ತ ಅಲಿಖಾನ್ ಬಂಧನಕ್ಕೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದು, ಈಗಾಗಲೇ ದೆಹಲಿ, ಹೈದರಾಬಾದ್ ನಗರಕ್ಕೆ ಸಿಸಿಬಿ ಪೊಲೀಸರ ತಂಡ ರವಾನೆಯಾಗಿದೆ ಎನ್ನಲಾಗಿದೆ.
ಈ ಕುರಿತು ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿಯವರ ಹುಡುಕಾಟದಲ್ಲಿದ್ದಾರೆ ಆದರೆ ಅವರು ತಲೆ ಮರೆಸಿಕೊಂಡಿದ್ದಾರೆ, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನುವ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.
ಬೆಂಗಳೂರು ಸಿಸಿಬಿ ವಿಶೇಷ ತಂಡವು ಜನಾರ್ದನ ರೆಡ್ಡಿ ಅವರನ್ನು ಭೇಟಿ ಆಗಲಿದೆ ಹಾಗೂ ಅವರನ್ನು ವಿಚಾರಣೆ ಒಳಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ