ನವದೆಹಲಿ:
ಕೇಂದ್ರ ಸರ್ಕಾರ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡುವ ಉದ್ದೇಶವನ್ನು ಹೊಂದಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸುತ್ತಿರುವ ಸಂಪೂರ್ಣ ಬಜೆಟ್ ಇದಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ತಮ್ಮ ಬಜೆಟ್ ಮಂಡನೆ ವೇಳೆ ಆರೋಗ್ಯ ವಲಯಕ್ಕೆ ₹69 ಸಾವಿರ ಕೋಟಿ ಅನುದಾನ ನೀಡಲಾಗುವುದು ಹಾಗು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜ್ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ ಅಂತ ಹೇಳಿದರು. ಇದಲ್ಲದೇ ದೇಶಾದ್ಯಂತೆ ಹೊಸದಾಗಿ 112 ಆಸ್ಪತ್ರೆಗಳ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ