ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ನಿಧನ!!

ಬೆಂಗಳೂರು: 

      ಮಾಜಿ ಕೇಂದ್ರ ಸಚಿವ, 91 ವರ್ಷ ವಯಸ್ಸಿನ ಎಂ.ವಿ.ರಾಜಶೇಖರನ್ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ

      ಕಳೆದ ಹಲವಾರು ತಿಂಗಳುಗಳಿಂದ ಬಹು ಅಂಗಾಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಅಪೊಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

      ಪ್ರಧಾನಿ ಮನಮೋಹನ್ ಸಿಂಗ್ ಅವರ ಮಂತ್ರಿ ಮಂಡಲದಲ್ಲಿ 2004ರ ಅವಧಿಯಲ್ಲಿ ರಾಜಶೇಖರನ್ ಅವರು ಕೇಂದ್ರ ಯೋಜನಾ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯಸಭೆ ಸಂಸದರಾಗಿ ಹಾಗು ರಾಜ್ಯದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

      ಬೆಂಗಳೂರು ಗ್ರಾಾಮಾಂತರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಜನಿಸಿದ್ದ ಎಂ.ವಿ. ರಾಜಶೇಖರನ್ ಕರ್ನಾಟಕದ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. ನಾಡಿನ ರಾಜಕಾರಣಿಗಳ ಸಾಲಿನಲ್ಲಿ ಅಗ್ರಗಣ್ಯರಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link