ವಿದೇಶಗಳಿಗೆ ಈರುಳ್ಳಿ ರಫ್ತು ನಿರ್ಬಂಧಿಸಿದ ಕೇಂದ್ರ ಸರ್ಕಾರ!!

ನವದೆಹಲಿ :

     ಏಪ್ರಿಲ್-ಜುಲೈ ಅವಧಿಯಲ್ಲಿ ರಫ್ತು 30% ರಷ್ಟು ಹೆಚ್ಚಾದ ಕಾರಣ ಸರ್ಕಾರವು ಈರುಳ್ಳಿ ರಫ್ತು ನಿಷೇಧಿಸಿದೆ.

     ಮಹಾರಾಷ್ಟ್ರದಲ್ಲಿ ಈ ಬಾರಿ ಸುರಿದ ಮಳೆಯು ಭಾರಿ ಅನಾಹುತಗಳನ್ನೇ ಸೃಷ್ಟಿಸಿದೆ. ರಾಜ್ಯದ ನಾಸಿಕ್ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಬಾರಿ ಬೆಳೆದ ಈರುಳ್ಳಿ ಬೆಳೆಯಲ್ಲ ನಾಶವಾಗಿದೆ. ಇದರಿಂದಾಗಿ ಪೂರೈಕೆ ಪ್ರಮಾಣ ತಗ್ಗಿರುವ ಹಿನ್ನೆಲೆ ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಚಿಲ್ಲರೇ ವ್ಯಾಪಾರಿಗಳು ಹೇಳುತ್ತಿದ್ದಾರೆ.

      ಭಾರತದ ದೇಶೀಯ ಚಿಲ್ಲರೆ ವ್ಯಾಪಾರದ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ವಿದೇಶಗಳಿಗೆ ಈರುಳ್ಳಿ ರಫ್ತು ಮಾಡುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. 

     ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ