ಗಾಂಧಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಎಸ್​ಪಿಜಿ ಭದ್ರತೆ ವಾಪಸ್!

ನವದೆಹಲಿ :

     ಸೋನಿಯಾ ಗಾಂಧಿ ಕುಟುಂಬಕ್ಕೆ ನೀಡಲಾಗಿದ್ದ ವಿಶೇಷ ಭದ್ರತಾ ಪಡೆ(ಎಸ್‍ಪಿಜಿ)ಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

      ಇತ್ತೀಚೆಗೆ ನಡೆದ ಭದ್ರತಾ ಪರಿಶೀಲನಾ ಸಭೆಯ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

      ಎಸ್​ಪಿಜಿ ಅಡಿಯಲ್ಲಿ ಸೋನಿಯಾ ಗಾಂಧಿ ಹಾಗೂ ಮಕ್ಕಳಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾರಿಗೆ ನೀಡಲಾಗುತ್ತಿದ್ದ ಭದ್ರತೆಯನ್ನು ಮೊಟಕುಗೊಳಿಸಿ ಝಡ್​ ಪ್ಲಸ್​ ಭದ್ರತೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

      ಅಮಿತ್ ಶಾ ನೇತೃತ್ವದಲ್ಲಿ ನಡೆದ ಗೃಹ ಸಚಿವಾಲಯದ ವಾರ್ಷಿಕ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುಪ್ತಚರ ಇಲಾಖೆ ಬೆದರಿಕೆ ಇಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಎಸ್‍ಪಿಜಿ ಭದ್ರತೆಯನ್ನು ಹಿಂದಕ್ಕೆ ಪಡೆಯಲು ಮುಂದಾಗಿದೆ.

      ಈ ಮೊದಲು ಆಗಸ್ಟ್‌ನಲ್ಲಿ ಕೇಂದ್ರವು ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್‌ಗೆ ನೀಡಿದ್ದ ಎಸ್‌ಪಿಜಿ ರಕ್ಷಣೆಯನ್ನು ವಾಪಸ್ಸು ಪಡೆದುಕೊಂಡಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap