ಕೊರೊನಾ ಹೆಚ್ಚಳ : ಚಾರ್ ಧಾಮ್ ಯಾತ್ರೆ ರದ್ದು!!

ಹರಿದ್ವಾರ:

       ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ರದ್ದುಗೊಳಿಸಲಾಗಿದೆ.

     ಈ ಬಗ್ಗೆ ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

      ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಈ ನಾಲ್ಕು ದೇವಾಲಯಗಳ ಅರ್ಚಕರು ಪೂಜೆಯನ್ನು ನೆರವೇರಿಸಲಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap