ಚಿಕ್ಕಬಳ್ಳಾಪುರ:
ಅನ್ಯಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸುತ್ತಿದ್ದ ಮೂವರು ಮಹಿಳೆಯರನ್ನ ಸಾರ್ವಜನಿಕರು ತರಾಟೆಗೆ ತೆಗದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಒಂಟಿ ಯುವತಿಯರನ್ನ ಟಾರ್ಗೆಟ್ ಮಾಡಿ ಅವರನ್ನು ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನಿಸಿದರೆ.
ಆರೋಪಿಗಳಾದ ಮೂವರು ಮಹಿಳೆಯರನ್ನು ಭಾರತಿ, ನಿರ್ಮಲ ಹಾಗೂ ಐಶ್ವರ್ಯ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಏಕಾಂಗಿಯಾಗಿರುತ್ತಿದ್ದ ಯುವತಿಯರ ಬಳಿ ಹೋಗಿ ತಮ್ಮ ಧರ್ಮಕ್ಕೆ ಸೇರುವಂತೆ ಮನಪರಿವರ್ತನೆಗೆ ಮಾಡುತ್ತಿದ್ದರು.
ಇದನ್ನ ಕಂಡ ಸ್ಥಳೀಯರು ಮನಪರಿವರ್ತನೆ ಮಾಡುತ್ತಿರುವ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದು ನಂತರ ಮೂವರು ಮಹಿಳೆಯರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ.ಸದ್ಯ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಮಹಿಳೆಯರನ್ನು ವಶಕ್ಕೆ ಪಡೆದ ಪೊಲೀಸರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ