ಕೇರಳ;
ಇಂದು ಕೇರಳದಲ್ಲಿ ನಕ್ಸಲ್ ನಿಗ್ರಹ ದಳದ ಭದ್ರತಾ ಪಡೆ ಸಿಬ್ಬಂದಿ ನಡೆಸಿರುವ ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಕೊಲ್ಲಲ್ಪಟ್ಟಿದ್ದು, ಈ ಪೈಕಿ ಇಬ್ಬರು ಚಿಕ್ಕಮಗಳೂರು ಜಿಲ್ಲೆಯ ಮೂಲದವರು ಎಂದು ತಿಳಿದುಬಂದಿದೆ.
ಕೇರಳದಲ್ಲಿ ನಡೆಸಲಾದ ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲರ ಪೈಕಿ ಶ್ರೀಮತಿ ಹಾಗೂ ಸುರೇಶ್ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯವರು ಎಂಬ ಮಾಹಿತಿಯನ್ನು ರಾಜ್ಯ ಪೊಲೀಸ್ ಇಲಾಖೆ ನೀಡಿದೆ.
ಮೃತ ಶ್ರೀಮತಿ ಶೃಂಗೇರಿ ತಾಲೂಕಿನ ಕೂಡಿಗೆ ಗ್ರಾಮದವಳಾಗಿದ್ದು, 2008ರಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರೆ, ಸುರೇಶ್ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನಾಗಿದ್ದು 2004ರಿಂದ ನಕ್ಸಲರು ಜೊತೆ ಗುರುತಿಸಿಕೊಂಡಿದ್ದ. ಈತನ ಮೇಲೆ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಸುಮಾರು 21 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ.
ಕೇರಳ ಅರಣ್ಯ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿಗಳು ನಕ್ಸಲರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಇವರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೈನಿಕರು ನಡೆಸಿದ ಕಾರ್ಯಾಚರಣೆಯಲ್ಲಿ ಶ್ರೀಮತಿ ಹಾಗೂ ಸುರೇಶ್ ಕೊಲ್ಲಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರ ಗುರುತು ಪತ್ತೆಯಾದ ನಂತರ ಅವರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ