ಚೀನಾ ಓಪನ್ : ಮೊದಲ ಸುತ್ತಿನಲ್ಲೇ ಸೈನಾ ಔಟ್!!

ಹೊಸದಿಲ್ಲಿ:

      ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಪ್ರತಿಷ್ಠಿತ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಮೊದಲ ಸುತ್ತಿನಲ್ಲೇ ಸೋಲಿನ ಆಘಾತ ಎದುರಿಸಿ, ಆಟದಿಂದ ಹೊರ ನಡೆದಿದ್ದಾರೆ.

    ಇಂದು ನಡೆದ ಮಹಿಳಾ ವಿಭಾಗದ ಸಿಂಗಲ್ಸ್ ಮುಖಾಮುಖಿಯಲ್ಲಿ ಮಾಜಿ ವಿಶ್ವ ನಂ.1 ಆಟಗಾರ್ತಿಯಾಗಿರುವ ಸೈನಾ ನೆಹ್ವಾಲ್ ಅವರು ವಿಶ್ವ ನಂ.19 ಆಟಗಾರ್ತಿ ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ 10-21, 17-21ರ ಅಂತರದ ನೇರ ಸೆಟ್‌ನಲ್ಲಿ ಸೋಲನುಭವಿಸಿ ನಿರಾಸೆಗೊಳಗಾದರು.

      ಚೀನಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಸೈನಾ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷೆ ಮಾಡಲಾಗಿತ್ತು. ಆದರೆ ಲಂಡನ್ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ವಿರುದ್ಧ ಎದುರಾಳಿ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಪರಿಣಾಮ 44 ನಿಮಿಷಗಳಲ್ಲೇ ಪಂದ್ಯವನ್ನು ವಶಪಡಿಸಿಕೊಂಡರು.

      ಇಂಡೇನೇಷ್ಯಾ ಓಪನ್ ಗೆಲ್ಲುವ ಮೂಲಕ ಪ್ರಸಕ್ತ ಸಾಲನ್ನು ಆರಂಭಿಸಿರುವ ಸೈನಾಗೆ ತದಾ ಬಳಿಕ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

      

Recent Articles

spot_img

Related Stories

Share via
Copy link
Powered by Social Snap