ಚಿತ್ರದುರ್ಗ:
ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಹೊಡೆದ ಘಟನೆ ಹೊಳಲ್ಕೆರೆಯ ಚಿಕ್ಕಚಾಜೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಶ್ರೀಗಳಿದ್ದ ಕಾರಿಗೆ ಅದಿರು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತ ಭೀಕರವಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಶ್ರೀಗಳು ಮತ್ತು ಅವರ ಕಾರು ಚಾಲಕ ಪಾರಾಗಿದ್ದಾರೆ. ಚಿಕ್ಕಜಾಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
