ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಸಹಿ!!

ನವದೆಹಲಿ:

      ಈಶಾನ್ಯ ರಾಜ್ಯಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ, ಸಾವು ನೋವು ಸಂಭವಿಸುತ್ತಿದ್ದರೂ ಈ ನಡುವೆ ಪೌರತ್ವ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

      ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ.

       ಈ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರನ್ನು ಅಕ್ರಮ ವಲಸಿಗರೆಂದು ಪರಿಗಣಿಸುವುದಿಲ್ಲ. ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. ಇದು 2014 ರ ಡಿಸೆಂಬರ್ 31 ರ ಒಳಗೆ ಬಂದವರಿಗೆ ಅನ್ವಯಿಸುತ್ತದೆ.

      ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ 125 ಮತ್ತು ವಿರೋಧವಾಗಿ 105 ಮತಗಳು ಬಿದಿದ್ದವು. ಇತ್ತ ಲೋಕಸಭೆಯಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಮಸೂದೆ 311 ಮತಗಳಿಂದ ಪಾಸ್ ಆಗಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link