ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಇಂದು ನಡೆದ ಬೃಹತ್ ಸಂಯುಕ್ತ ಪ್ರತಿಪಕ್ಷಗಳ ಮಹಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ಪ್ರಪಂಚದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಆದರೆ ನಮ್ಮ ಪ್ರಧಾನಿ ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ಇಂತಹ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಯೇತರರು ಕೈಜೋಡಿಸಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ವ್ಯಾಪಾರಿಗಳಿಗೆ ಮಣೆ ಹಾಕುತ್ತಾ, ಜನರನ್ನು ಕೋರ್ಟ್ಗೆ ಎಳೆಯುತ್ತಿದೆ. ನೋಟು ಅಮಾನ್ಯೀಕರಣ ಮಾಡಿ ಗ್ರಾಮೀಣ ಭಾಗದ ಆರ್ಥಿಕತೆಯನ್ನೇ ನಾಶ ಮಾಡಿತು. ಜಿಎಎಸ್ಟಿಯಿಂದ ಕಲ್ಯಾಣ ಕಾರ್ಯಕ್ರಮಗಳು ಹಾಳಾದವು. ಜನರ ನೋವು ಕೇಳದೆ ಜಾಣ ಕುರುಡು-ಕಿವುಡುತನ ಪ್ರದರ್ಶಿಸುತ್ತಿದೆ. ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಸರ್ಕಾರ ಉತ್ತಮ ಆಡಳಿತ ನೀಡುತ್ತಾ ಮುಂದುವರೆದಿದೆ. ಆದರೆ ಇದನ್ನು ಸಹಿಸದ ಬಿಜೆಪಿ ಕರ್ನಾಟಕದಲ್ಲಿ ಅನುಸರಿಸಿದ ನೀತಿ ಅಸಂವಿಧಾನಿಕವಾದುದು. ಎಂದು ರಾಜ್ಯದ ಪರಿಸ್ಥಿತಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ