ನವದೆಹಲಿ:
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ 6 ನೇ ಪ್ರಕರಣದಲ್ಲೂ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ವಿವಿಧೆಡೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 9 ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದವು. ಈ ದೂರುಗಳ ವಿಚಾರಣೆಯನ್ನು ಮೇ 6 ಕ್ಕೂ ಮುನ್ನ ಮುಗಿಸುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮೋದಿ ವಿರುದ್ಧದ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಿದ ಆಯೋಗ 6 ನೇ ಪ್ರಕರಣದಲ್ಲಿಯೂ ಮೋದಿ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಎಂದಿದೆ.
ಗುಜರಾತ್ನ ಪಠಾಣದಲ್ಲಿ ಏಪ್ರಿಲ್ 21 ರಂದು ಮಾಡಿದ್ದ ಭಾಷಣದಲ್ಲಿ ಬಾಲಾಕೋಟ ವಾಯುದಾಳಿ ಹಾಗೂ ವಿಂಗ್ ಕಮಾಂಡರ್ ಅಭಿನಂದನ್ ಕುರಿತು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ವಿಂಗ್ ಕಮಾಂಡರ್ನನ್ನು ಪಾಕಿಸ್ತಾನ್ ಬಿಡದಿದ್ದರೇ ಅಂದು ಪಾಕಿಸ್ತಾನ್ಕ್ಕೆ ಖತಲ್ ಖಿ ರಾತ್ ಆಗ್ತಿತ್ತು ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಆಯೋಗ ಸುಧೀರ್ಘ ವಿಚಾರಣೆ ಬಳಿಕ ಪ್ರಚಾರದಲ್ಲಿ ಸೇನೆಯ ಹೆಸರು ಬಳಕೆಯ ಮೇಲೆ ಇದ್ದ ಮಾರ್ಗಸೂಚಿಯನ್ನು ಮೋದಿ ಅವರು ವಾರಾಣಸಿಯಲ್ಲಿ ತಮ್ಮ ಭಾಷಣದಲ್ಲಿ ಉಲ್ಲಂಘಿಸಿಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿತ್ತು.
ಈ ಮೂಲಕ ಈ ಪ್ರಕರಣ ಸೇರಿದಂತೆ ಪ್ರಧಾನಿ ಮೋದಿ ವಿರುದ್ಧ ಎಲ್ಲ ಆರೂ ಪ್ರಕರಣಗಳಲ್ಲಿ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ