ಸಿಎಎ ಮಾನ್ಯತೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ!!

ನವದೆಹಲಿ :

      ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಕೇಸುಗಳ ವಿಚಾರಣೆಯನ್ನು ಸಾಂವಿಧಾನಿಕ ಪೀಠ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

      ಪೌರತ್ವ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ 143 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳ ವಿಚಾರಣೆಯನ್ನು ಸಾಂವಿಧಾನಿಕ ಪೀಠ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು,

      ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ತ್ರಿಸದಸ್ಯ ಪೀಠವು ಇಂದು ಅರ್ಜಿಗಳ ವಿಚಾರಣೆ ನಡೆಸಿದ್ದು, ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಲಾಗಿರುವುದರಿಂದ ಸಂವಿಧಾನದ 145 (3) ನೇ ವಿಧಿಯ ಪ್ರಕಾರ ಈ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ಸಾವಿಂಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap