ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,370 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,14,682ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 650 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,17,956ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇನ್ನೂ 6,80,680 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 70,16,046 ಸೋಂಕಿತರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 67,549 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
