ಭಾರತದಲ್ಲಿ 71 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!

ನವದೆಹಲಿ:

      ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 71 ಲಕ್ಷ ಗಡಿದಾಟಿದೆ.

     ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 71,20,539ಕ್ಕೆ ತಲುಪಿದ್ದು, 71 ಲಕ್ಷ ಸೋಂಕಿತರ ಪೈಕಿ 61,49,536 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 8,61,853 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     ಇನ್ನು ಕಳೆದ 24 ಗಂಟೆಗಳಲ್ಲಿ 816 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,09,150ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link