ನವದೆಹಲಿ :
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67,708 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ನಿನ್ನೆ ಒಂದೇ ದಿನ 67,708 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ.
India reports a spike of 67,708 new #COVID19 cases & 680 deaths in the last 24 hours.
Total case tally stands at 73,07,098 including 8,12,390 active cases, 63,83,442 cured/discharged/migrated cases & 1,11,266 deaths: Ministry of Health and Family Welfare pic.twitter.com/a3tEOsM8Zs
— ANI (@ANI) October 15, 2020
ಕಳೆದ 24ಗಂಟೆಯಲ್ಲಿ 680 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 63,83,442 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 8,12,390 ಸಕ್ರಿಯ ಪ್ರಕರಣಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ