ಮುಂಬೈ :
ಕೊರೋನಾ ವೈರಸ್ಗೆ ಇಡೀ ಪ್ರಪಂಚ ತತ್ತರಿಸಿದೆ. ಇಲ್ಲಿಯವರೆಗೂ ಜಗತ್ತಿನಾದ್ಯಂತ 11 ಸಾವಿರಕ್ಕೂ ಹೆಚ್ಚು ಜನರನ್ನು ಈ ಕೊರೋನಾ ಬಲಿ ತೆಗೆದುಕೊಂಡಿದೆ.
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾದಿಂದ ಮುಂಬೈನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.
ಮುಂಬೈನಲ್ಲಿ 53 ವರ್ಷದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ