ನವದೆಹಲಿ:
ರಾಷ್ಟ್ರ ರಾಜಧಾನಿಯಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಸಾಂಕ್ರಾಮಿಕ ರೋಗದ ಸೋಂಕು ತಗುಲಿದೆ.
ಸಬ್ ಇನ್ಸ್ ಪೆಕ್ಟರ್ ದೆಹಲಿಯ ಟ್ರಾಫಿಕ್ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪೊಲೀಸ್ ಸಿಬ್ಬಂದಿಗೆ ಕೋವಿಡ್ 19 ವೈರಸ್ ತಗುಲಿದ ಮೊದಲ ಪ್ರಕರಣ ಇದಾಗಿದೆ. ಎಎಸ್ ಐ ವಾಸವಾಗಿದ್ದ ಕಾಲೋನಿಯನ್ನು ಲಾಕ್ ಡೌನ್ ಮಾಡಲಾಗಿದ್ದು, ಎಷ್ಟು ಮಂದಿ ಸಂಪರ್ಕದಲ್ಲಿದ್ದರು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ. ಇದೀಗ ಎಎಸ್ ಐಗೆ ಕೋವಿಡ್ ಸೋಂಕು ಹೇಗೆ ಹರಡಿದೆ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅಲ್ಲದೇ ಇವರ ಸಂಪೂರ್ಣ ಕುಟುಂಬವನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
