ನವದೆಹಲಿ:
ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ 12 ಲಕ್ಷದತ್ತ ಮುಖ ಮಾಡಿದೆ.
ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಏರಿಕೆಯಾಗಿದೆ.
11,92,915 ಸೋಂಕಿತರ ಪೈಕಿ 7,53,049 ಗುಣಮುಖರಾಗಿದ್ದಾರೆ.4,11,133 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
