ನವದೆಹಲಿ:
ಅಂಫಾನ್ ಚಂಡಮಾರುತ ವೇಳೆ ಕರ್ತವ್ಯ ನಿರ್ವಹಿಸಿದ್ದ 50 ಮಂದಿ ಎನ್ ಡಿ ಆರ್ ಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ NDRF ಮುಖ್ಯಸ್ಥ ಎಸ್ಎನ್ ಪ್ರಧಾನ್ ಮಾಹಿತಿ ಕೊಟ್ಟಿದ್ದು, ಚಂಡಮಾರುತ ಸಮಯದಲ್ಲಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಕರ್ತವ್ಯ ನಿರತರಾಗಿದ್ದ 50 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಎನ್ಡಿಆರ್ಎಫ್ ಮಾಹಿತಿ ನೀಡಿದೆ.
ಇದೇ ವೇಳೆ ದೆಹಲಿಯಲ್ಲಿದ್ದ 26 ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದ್ದು ಇದರೊಂದಿಗೆ ಒಟ್ಟಾರೆ 76 ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ.
ಪ್ರಸ್ತುತ ಇವರನ್ನೆಲ್ಲಾ ಕೋವಿಡ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ 50 ಸಿಬ್ಬಂದಿಯಲ್ಲಿ ಕೊರೋನಾ ಲಕ್ಷಣಗಳೇ ಇಲ್ಲ ಎಂದು ಎನ್ಡಿಆರ್ಎಫ್ ಮುಖ್ಯಸ್ಥ ಎಸ್ಎನ್ ಪ್ರಧಾನ್ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ