ನವದೆಹಲಿ:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲಿ ಕೊವಿಡ್-19 ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರು ನಾಳೆ (ಮಂಗಳವಾರ) ಮುಂಜಾನೆ ಟೆಸ್ಟ್ಗೆ ಒಳಗಾಗಲಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಈ ವಿಷಯ ತಿಳಿಸಿದ್ದು, ಕೇಜ್ರಿವಾಲ್ ಅವರು ಸ್ವತಃ ಪ್ರತ್ಯೇಕ ವ್ಯವಸ್ಥೆಯಲ್ಲಿದ್ದಾರೆ.
ಭಾನುವಾರ ಮಧ್ಯಾಹ್ನದಿಂದ ಅವರಲ್ಲಿ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, ಆಗಿನಿಂದಲೇ ಸೆಲ್ಫ್ ಐಸೋಲೇಟ್ ಆಗಿದ್ದಾರೆ. ತಾವು ನಡೆಸಬೇಕಿದ್ದ ಎಲ್ಲ ಸಭೆಗಳನ್ನೂ ರದ್ದುಗೊಳಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೆಮ್ಮು ಮತ್ತು ಮಧುಮೇಹದ ಸಮಸ್ಯೆಯಿದೆ. ಇದೀಗ ಗಂಟಲು ನೋವು ಸಹಿತ ಜ್ವರಕ್ಕೆ ತುತ್ತಾಗಿರುವ ಅರವಿಂದ್ ಕೇಜ್ರಿವಾಲ್ಗೆ ಒಂದು ದಿನ ಕಾದು, ನಂತರ ತಪಾಸಣೆಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದರಿಂದ ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕು ವಿಪರೀತ ಪ್ರಸರಣವಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿದಿನ 1000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
