ನವದೆಹಲಿ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿರುವುದಾಗಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಗಾಂಧಿ,’ಸೌಮ್ಯ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ನಡೆಸಿದ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ರಾಹುಲ್ ಬರೆದಿದ್ದಾರೆ.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi) April 20, 2021
ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ