ಶಬರಿಮಲೆಗೆ ದರ್ಶನಕ್ಕೆ ಬಂದಿದ್ದ ಭಕ್ತನಿಗೆ ಕೊರೊನಾ ಸೋಂಕು!!

ತಿರುವನಂತಪುರಂ :

    ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

     ದೇವಸ್ಥಾನಕ್ಕೆ ಬಂದಿದ್ದ ಸಂದರ್ಭದಲ್ಲಿ ಆಂಟಿಜನ್ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ವ್ಯಕ್ತಿಯು ಒಬ್ಬಂಟಿಯಾಗಿ ದೇವರ ದರ್ಶನಕ್ಕೆ ಬಂದಿದ್ದ ಕಾರಣ ಆತನನ್ನು ಕೊವಿಡ್ ಫರ್ಸ್ಟ್ ಲೈನ್ ಟ್ರೀಟ್‌ಮೆಂಟ್ ಸೆಂಟರ್‌ಗೆ ಕಳುಹಿಸಲಾಗಿದೆ.

     ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿದೆ.

     ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಭಕ್ತನಿಗೆ ಶಬರಿಮಲೆ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ. ಅ.17 ರಿಂದ ಅಯ್ಯಪ್ಪಸ್ವಾಮಿ ದೇಗುಲ ತೆರೆಯಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. ಅಕ್ಟೋಬರ್ 21ರವರೆಗೆ ಭಕ್ತರಿಗೆ ಬರಲು ಅವಕಾಶ ನೀಡಲಾಗಿದೆ.ನಿತ್ಯ 250 ಭಕ್ತರಿಗೆ ಮಾತ್ರ ಅವಕಾಶವಿದೆ. 10 ರಿಂದ 60 ವರ್ಷದೊಳಗಿನವರಿಗೆ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap