ನವದೆಹಲಿ:
ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 17,296 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 17,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಒಂದೇ ದಿನದಲ್ಲಿ 407 ಮಂದಿ ಡೆಡ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
407 deaths and highest single-day spike of 17,296 new #COVID19 positive cases reported in India in the last 24 hours.
Positive cases in India stand at 4,90,401 including 1,89,463 active cases,2,85,637cured/discharged/migrated & 15301 deaths: Ministry of Health & Family Welfare pic.twitter.com/g8EjQz2UwA
— ANI (@ANI) June 26, 2020
ಇದುವರೆಗೂ ಒಟ್ಟು 4,90,41 ಸೋಂಕಿತರಿದ್ದಾರೆ. 2,85,637 ಮಂದಿ ಗುಣಮುಖರಾಗಿದ್ದಾರೆ. 1,89,463 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಕೊರೊನಾವೈರಸ್ ಸೋಂಕು ಪತ್ತೆಗಾಗಿ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ತಪಾಸಣೆ ನಡೆಸಲಾಗುತ್ತಿದೆ. ಈ ಪ್ರಮಾಣದಲ್ಲೂ ಭಾರಿ ಏರಿಕೆ ಕಂಡು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ