ನವದೆಹಲಿ:
ಭಾರತದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 26,506 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಶುಕ್ರವಾರ ಒಂದೇ ದಿನ 26,506 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಇದೇ ವೇಳೆ 475 ಮಂದಿ ಕೊರೋನಾಗೆ ಬಲಿಯಾಗುವುದರೊಂದಿಗೆ ಸಾವಿನ ಸಂಖ್ಯೆ 21,604ಕ್ಕೆ ತಲುಪಿದೆ.
India reports 475 deaths and the highest single-day spike of 26,506 new #COVID19 cases in the last 24 hours. Positive cases stand at 7,93,802 including 2,76,685 active cases, 4,95,513 cured/discharged/migrated & 21,604 deaths: Ministry of Health & Family Welfare pic.twitter.com/13boGr8aVK
— ANI (@ANI) July 10, 2020
ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 7,93,802ಕ್ಕೆ ಏರಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 4,95,513 ಜನ ಮಾತ್ರ. ದೇಶದಲ್ಲಿ ಇನ್ನೂ 2,76,685 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ