27 ಲಕ್ಷ ಮೀರಿದ ದೇಶದ ಕೋವಿಡ್ ಸೊಂಕಿತರ ಸಂಖ್ಯೆ!!

ನವದೆಹಲಿ :

      ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌-19 ದೃಢಪಟ್ಟ 55,079 ಹೊಸ ಪ್ರಕರಣಗಳು ದಾಖಲಾಗಿವೆ.

       ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 55,079 ಹೊಸ ಪ್ರಕರಣಗಳು ವರದಿಯಾಗಿದ್ದು, 876 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

     ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 51,797ಕ್ಕೆ ಏರಿಕೆಯಾಗಿದೆ.

      ದೇಶದ ಒಟ್ಟು 27,02,743 ಕೊರೊನಾ ಸೋಂಕಿತರ ಪೈಕಿ ಸದ್ಯ 6,73,166 ಸಕ್ರಿಯ ಪ್ರಕರಣಗಳಿದ್ದು, 19,77,780 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕಳೆದ 24 ಗಂಟೇಲಿ 8,99,864 ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. 

     ದೇಶದಲ್ಲಿ ಪ್ರತಿ ದಿನ 50 ಸಾವಿರಕ್ಕಿಂತ ಹೆಚ್ಚಿನ ಸೋಂಕಿತರು ಕಂಡುಬರುತ್ತಿದೆ. ಕೋವಿಡ್-19 ಸೋಂಕಿತರ ಸಂಖ್ಯೆ 27 ಲಕ್ಷ ಮೀರಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap