ಮೇ.3ರ ವರೆಗೆ ರೈಲು ಸಂಚಾರ, ವಿಮಾನ ಹಾರಾಟ ರದ್ದು!!

ಬೆಂಗಳೂರು:

      ಕೊರೊನಾ ತಡೆಯಲು ದೇಶದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೇ 3ರ ತನಕ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಮಂಗಳವಾರ ಘೋಷಣೆ ಮಾಡಿದರು.

      ಕೋವಿಡ್‌–19 ನಿಯಂತ್ರಿಸುವ ನಿಟ್ಟಿನಲ್ಲಿ ಪ್ರೀಮಿಯಂ ರೈಲುಗಳು, ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳು, ಉಪನಗರ ರೈಲುಗಳು, ಕೋಲ್ಕತ್ತಾ ಮೆಟ್ರೋ ರೈಲು, ಕೊಂಕಣ ರೈಲ್ವೆ, ಸೇರಿದಂತೆ ಎಲ್ಲ ಪ್ರಯಾಣಿಕ ರೈಲು ಸೇವೆಗಳನ್ನು ಮೇ 3ರ ವರೆಗೂ ರದ್ದು ಪಡಿಸಿರುವುದಾಗಿ  ರೈಲ್ವೆ ಸಚಿವಾಲಯ ತಿಳಿಸಿದೆ.

      ಎಲ್ಲ ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದತಿಯನ್ನು ಮೇ 3ರ ವರೆಗೂ ಮುಂದುವರಿಸಿರುವುದಾಗಿ ವಿಮಾನಯಾನ ಸಚಿವಾಲಯ ಆದೇಶಿಸಿದೆ. 

      ಕೆಲವು ವಿಮಾನಯಾನ ಸಂಸ್ಥೆಗಳು ಸಿಬ್ಬಂದಿ ವೇತನ ಕಡಿತಗೊಳಿಸಿದ್ದರೆ, ಇನ್ನೂ ಕೆಲವು ಸಂಸ್ಥೆಗಳು ವೇತನ ರಹಿತ ಕಡ್ಡಾಯ ರಜೆ ಘೋಷಿಸಿವೆ. ಈ ಹಿಂದೆ ಮಾಡಲಾಗಿದ್ದ ಟಿಕೆಟ್‌ ಬುಕ್ಕಿಂಗ್‌ಗಳನ್ನು ರದ್ದುಗೊಳಿಸಲಾಗಿದೆ. ಸರಕು ಸಾಗಣೆ ವಿಮಾನಗಳು, ಹೆಲಿಕಾಪ್ಟರ್‌ಗಳು ಹಾಗೂ ವೈದ್ಯಕೀಯ ತುರ್ತು ಸೇವೆಗಳಿಗಾಗಿ ವಿಮಾನ ಹಾರಾಟಕ್ಕೆ ಅವಕಾಶವಿದೆ ಎಂದು ಡಿಜಿಸಿಎ ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

       

Recent Articles

spot_img

Related Stories

Share via
Copy link
Powered by Social Snap