ಮಂಗಳೂರು:
ವಿಶ್ವಕಪ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರನ್ನು ತಲಪಾಡಿ ನಿವಾಸಿ ದೇವಿಕಿರಣ್ (24) ಮತ್ತು ಜಪ್ಪಿನಮೊಗರು ನಿವಾಸಿ ಕೀರ್ತಿರಾಜ್ (24) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 7.20 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳು ಲೋಟಸ್ ಮತ್ತು ಆರೆಂಜ್ ಆಪ್ ಬಳಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಐಪಿಎಲ್ ಮತ್ತು ವಿಶ್ವಕಪ್ ಕ್ರಿಕೆಟ್ ಸಂದರ್ಭ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್ ಜಾಲವಿರುವ ಬಗ್ಗೆ ಮನಗಂಡ ಕಮಿಷನರ್ ಸಂದೀಪ್ ಪಾಟೀಲ್ ಈ ಕೃತ್ಯದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಕಾರ್ಯಚರಣೆ ಆರಂಭಿಸಿದ್ದಾರೆ.
ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಮಟ್ಟಹಾಕಲು ಮಂಗಳೂರು ಪೊಲೀಸರು ಪಣ ತೊಟ್ಟಿದ್ದು, ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರಗಳ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ